ADVERTISEMENT

ಬಿಜೆಪಿ, ಆರ್‌ಎಸ್‌ಎಸ್‌ನ ವಿಷಕಾರಿ ಮನಸ್ಥಿತಿಗೆ ನಾವು ಹೆದರುವುದಿಲ್ಲ: ಖರ್ಗೆ

ಪಿಟಿಐ
Published 21 ಸೆಪ್ಟೆಂಬರ್ 2024, 10:23 IST
Last Updated 21 ಸೆಪ್ಟೆಂಬರ್ 2024, 10:23 IST
<div class="paragraphs"><p>ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ </p></div>

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ಶ್ರೀನಗರ: ಆರ್‌ಎಸ್‌ಎಸ್ ಮತ್ತು ಬಿಜೆಪಿಯ ವಿಷಕಾರಿ ಮನಸ್ಥಿತಿಗೆ ನಾವು ಹೆದರುವುದಿಲ್ಲ ಎಂದು ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ವಿರುದ್ಧದ ನೀಡಲಾಗುತ್ತಿರುವ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಕ್ಷ ಆಂದೋಲವನ್ನು ಪ್ರಾರಂಭಿಸಲಿದೆ ಎಂದು ಶನಿವಾರ ತಿಳಿಸಿದ್ದಾರೆ.

ADVERTISEMENT

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಮತ್ತು ಬಿಜೆಪಿಯ ನಾಯಕರು ನಮ್ಮ ನಾಯಕರ (ರಾಹುಲ್) ನಾಲಿಗೆ ಕತ್ತರಿಸುವ ಹೇಳಿಕೆ ಸೇರಿದಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ರಾಹುಲ್‌ ವಿರುದ್ಧ ದ್ವೇಷದ ವಾತಾರವಣ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.‌

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರ ಪ್ರಚೋದನಕಾರಿ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಲಕ್ಷ್ಯಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುತ್ತಿರುವ ತಮ್ಮ ಪಕ್ಷದ ನಾಯಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯನ್ನು ‘ಭಯೋತ್ಪಾದಕ’ ಮತ್ತು ‘ದೇಶವಿರೋಧಿ’ ಎಂದು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವ ನಾಯಕರ ವಿರುದ್ಧ ಪ್ರಧಾನಿ ಮೋದಿ ಕ್ರಮಕೈಗೊಳ್ಳದೇ, ಇಂತಹ ಹೇಳಿಕೆಗಳನ್ನು ‍ಪ್ರೋತ್ಸಾಹಿಸುತ್ತಿದ್ದಾರೆ ಎಂದು ಖರ್ಗೆ ಟೀಕಾ ಪ್ರಹಾರ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷದ ಅಭ್ಯರ್ಥಿಗಳ ಪರ ಖರ್ಗೆ ಮತಯಾಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.