ADVERTISEMENT

ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಸಿಬಿಐ, ಇಡಿ, ಎನ್‌ಐಎ ಮುಂತಾದ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವುಗಳ ಮೇಲೆ ನಮಗೆ ನಂಬಿಕೆ ಇಲ್ಲ: ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2023, 3:04 IST
Last Updated 29 ಏಪ್ರಿಲ್ 2023, 3:04 IST
ಪುಲ್ವಾಮ ದಾಳಿಯ ಚಿತ್ರಣ
ಪುಲ್ವಾಮ ದಾಳಿಯ ಚಿತ್ರಣ    ಕಡತ ಚಿತ್ರ

ಗುವಾಹಟಿ: ಪುಲ್ವಾಮ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಅವರ ಹೇಳಿಕೆ ಬಗ್ಗೆ ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಿವೃತ್ತ ಹೈಕೋರ್ಟ್‌ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಇಲ್ಲದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿಯೂ ಹೇಳಿದೆ.

‘ಸತ್ಯ‍ಪಾಲ್ ಮಲ್ಲಿಕ್ ಅವ ಹೇಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಮೌನವಾಗಿದ್ದಾರೆ. ಗುಪ್ತಚರ ವೈಫಲ್ಯ ಹಾಗೂ ಭದ್ರತಾ ಸಿಬ್ಬಂದಿಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ವಿಮಾನ ನೀಡಲು ನಿರಾಕರಿಸಿದೆ‘ ಎಂದು ಎಐಸಿಸಿ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಬಿಐ, ಇಡಿ, ಎನ್‌ಐಎ ಮುಂತಾದ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವುಗಳ ಮೇಲೆ ನಮಗೆ ನಂಬಿಕೆ ಇಲ್ಲ. ಹಾಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯವರ ಮೇಲ್ವಿಚಾರಣೆಯಲ್ಲಿ ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿಯವವರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ನಾವು ಆಗ್ರಹಿಸುತ್ತೇವೆ‘ ಎಂದು ಹೇಳಿದ್ದಾರೆ.

ADVERTISEMENT

ಇನ್ನು ಮಲ್ಲಿಕ್‌ ಅವರ ಅರೋಪ ಸಂಬಂಧ ಪ್ರಧಾನಿ ನರೇಂದ್ರ ಅವರ ಮೌನದ ಬಗ್ಗೆ ಪ್ರಶ್ನೆ ಮಾಡಿರುವ, ‘ನಮ್ಮ ವಿರುದ್ಧ ಆರೋಪ ಬಂದಾಗ ನಾವು ಅದಕ್ಕೆ ಸಮಜಾಯಿಷಿ ನೀಡಿದ್ದೆವು. ಈಗ ಮಲ್ಲಿಕ್‌ ಅವರು ಆರೋಪ ಮಾಡಿ 15 ದಿನಗಳು ಕಳೆದಿವೆ. ಈ ಬಗ್ಗೆ ಪ್ರಧಾನಿ ಮೋದಿ ಅವರ ಮೌನ ಏಕೆ?‘ ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.