ADVERTISEMENT

ಖಾಕಿ ಚಡ್ಡಿ ಸುಡುವ ಚಿತ್ರ ಹಂಚಿದ ಕಾಂಗ್ರೆಸ್; ಸಂಸದ ತೇಜಸ್ವಿ ಸೂರ್ಯ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2022, 8:35 IST
Last Updated 12 ಸೆಪ್ಟೆಂಬರ್ 2022, 8:35 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು: ಖಾಕಿ ಚಡ್ಡಿ ಸುಡುವ ಚಿತ್ರ ಪ್ರಕಟಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೋಮವಾರ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ, 'ಭಾರತ್ ಜೋಡೊ ಯಾತ್ರೆ'ಗೆ ಸಂಬಂಧಿಸಿದಂತೆ ಟ್ವೀಟ್‌ನಲ್ಲಿ, ಖಾಕಿ ಸುಡುವ ಚಿತ್ರವನ್ನು ಹಂಚಿದೆ.

ದೇಶವನ್ನು ದ್ವೇಷದ ಸಂಕೋಲೆಯಿಂದ ಮತ್ತು ಬಿಜೆಪಿ-ಆರ್‌ಎಸ್‌ಎಸ್ ಹಾನಿಯಿಂದ ಮುಕ್ತಗೊಳಿಸಲು ನಾವು ಹಂತ ಹಂತವಾಗಿ ಗುರಿ ತಲುಪುತ್ತಿದ್ದೇವೆ ಎಂದು ಹೇಳಿತ್ತು.

ಇದಕ್ಕೆ ತಿರುಗೇಟು ನೀಡಿರುವ ಸಂಸದ ತೇಜಸ್ವಿ ಸೂರ್ಯ, ಈ ಚಿತ್ರವು ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದ್ದು, ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ. ಈ ಹಿಂದೆ ಅವರು ಹಚ್ಚಿದ ಬೆಂಕಿ ದೇಶದ ಬಹುತೇಕ ಭಾಗವನ್ನು ಸುಟ್ಟು ಹಾಕಿದೆ. ರಾಜಸ್ಥಾನ ಹಾಗೂ ಛತ್ತೀಸಗಡದಲ್ಲಿ ಉಳಿದಿರುವ ಕೆಂಡ ಶೀಘ್ರದಲ್ಲೇ ಬೂದಿಯಾಗಲಿದೆ ಎಂದು ಹೇಳಿದ್ದಾರೆ.

1984ರಲ್ಲಿ ಕಾಂಗ್ರೆಸ್ ಬೆಂಕಿ ದೆಹಲಿಯನ್ನು ಸುಟ್ಟು ಹಾಕಿತು. 2002ರಲ್ಲಿ ಗೋಧ್ರಾದಲ್ಲಿ 59 ಕರಸೇವಕರನ್ನು ಜೀವಂತವಾಗಿ ಸುಟ್ಟು ಹಾಕಿತು. ಈಗ ಮತ್ತೆ ಹಿಂಸೆಯ ಕರೆ ನೀಡಿದ್ದಾರೆ ಎಂದು ಮಗದೊಂದು ಟ್ವೀಟ್‌ನಲ್ಲಿ ತೇಜಸ್ವಿ ಸೂರ್ಯ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.