ಹೈದರಾಬಾದ್: ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಆರ್‌ಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದ್ದು ಕಾಂಗ್ರೆಸ್ 20ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಮಧಿರಾದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು ‘ನಾನು ನಿಮಗೆ ಗ್ಯಾರಂಟಿ ಕೊಡುತ್ತೇನೆ ಕಾಂಗ್ರೆಸ್‌ನವರು ಗೆಲ್ಲುವುದಿಲ್ಲ, ಅವರಲ್ಲಿ ಡಜನ್‌ಗೂ ಹೆಚ್ಚು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ. ಅವರು 20ಕ್ಕಿಂತಲೂ ಕಡಿಮೆ ಸ್ಥಾನಗಳನ್ನು ಪಡೆಯಲಿದ್ದಾರೆ ಎಂದರು.
ನಾನು ಇಲ್ಲಿಯವರೆಗೂ 70 ಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದೇನೆ. ಈ ಎಲ್ಲಾ ಸ್ಥಾನಗಳಲ್ಲೂ ಬಿಆರ್‌ಎಸ್ ಗೆಲ್ಲಲಿದೆ. ಒಂದು ವೇಳೆ ಉಳಿದ ಕ್ಷೇತ್ರಗಳಿಗೆ ಭೇಟಿ ಕೊಟ್ಟರೆ ಕಾಂಗ್ರೆಸ್ ಮತ್ತಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದರು.
ಬಿಆರ್‌ಎಸ್ ಪಕ್ಷ ಮತ್ತೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಸಲ ಕಳೆದ ಸಲಕ್ಕಿಂತ ಹೆಚ್ಚು ಸ್ಥಾನಗಳು ಬರಲಿವೆ, ಮತ್ತೆ ಬಿಆರ್‌ಎಸ್ ಅಧಿಕಾರಕ್ಕೆ ಬರುವುದು ಗ್ಯಾರಂಟಿ, ಈ ಬಗ್ಗೆ ಯಾವುದೇ ಅನುಮಾನಗ ಬೇಡ ಎಂದು ಅವರು ಹೇಳಿದರು.
2014ರಲ್ಲಿ ತೆಲಂಗಾಣ ರಚನೆಯಾಗುವ ಮೊದಲು ಅವಿಭಜಿತ ಆಂಧ್ರಪ್ರದೇಶವನ್ನು ಆಳಿದ ಕಾಂಗ್ರೆಸ್ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಪೂರೈಸಲು ಸಾಧ್ಯವಾಗಲಿಲ್ಲ. 2014ರಿಂದ ಬಿಆರ್‌ಎಸ್ ತ್ವರಿತಗತಿಯಲ್ಲಿ ಪ್ರಗತಿ ಸಾಧಿಸಿದೆ. ತಲಾ ಆದಾಯದಲ್ಲಿ ರಾಜ್ಯ ದೇಶದಲ್ಲಿ ಅಗ್ರಸ್ಥಾನದಲ್ಲಿರುವುದೇ ಇದಕ್ಕೆ ಸಾಕ್ಷಿ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.