ADVERTISEMENT

ಲೋಕಸಭೆ ಚುನಾವಣೆ–ಪ್ರಣಾಳಿಕೆ ಅಂಗೀಕರಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಏಜೆನ್ಸೀಸ್
Published 19 ಮಾರ್ಚ್ 2024, 2:41 IST
Last Updated 19 ಮಾರ್ಚ್ 2024, 2:41 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

(ಕೃಪೆ–@ani)

ನವದೆಹಲಿ: ಏಳು ಹಂತಗಳಲ್ಲಿ ನಡೆಯಲಿರುವ 2024ರ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಅಂಗೀಕರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ( CWC) ಮಂಗಳವಾರ ಸಭೆ ಸೇರಲಿದೆ.

ADVERTISEMENT

ಏಪ್ರಿಲ್ 19 ರಿಂದ ಪ್ರಾರಂಭವಾಗುವ 7 ಹಂತದ ಚುನಾವಣೆಗೆ ಪಕ್ಷದ ಉಳಿದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ (CEC) ಕೂಡ ಸಭೆ ಸೇರುವ ಸಾಧ್ಯತೆಯಿದೆ.

2024ರ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಛತ್ತೀಸಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್ ಸಿಂಗ್ ದೇವ್ ಸಮಿತಿಯ ಸಂಚಾಲಕರಾಗಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಶಶಿ ತರೂರ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಈ ಸಮಿತಿಯ ಸದಸ್ಯರು.

ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯು 'ಜನರ ಪ್ರಣಾಳಿಕೆ' ಆಗಿರುತ್ತದೆ. ಪಕ್ಷದ ಮುಖಂಡರ ಸಾರ್ವಜನಿಕ ಸಮಾಲೋಚನೆಯ ಹೊರತಾಗಿ, ಇ-ಮೇಲ್ ಮತ್ತು ವೆಬ್‌ಸೈಟ್ ಮೂಲಕ ಸಲಹೆಗಳನ್ನು ಪಡೆಯಲಾಗಿದೆ ಎಂದು ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.