ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ಘೋಷಿಸಿರುವುದು ಪಕ್ಷದಲ್ಲಿ ಆಂತರಿಕ ಭಿನ್ನಮತಕ್ಕೆ ಕಾರಣವಾಗಿದೆ.
ಪದ್ಮ ಪ್ರಶಸ್ತಿ ಘೋಷಣೆ ವಿಚಾರವನ್ನು ಕಾಂಗ್ರೆಸ್ ನಾಯಕರು ಬಹಿರಂಗವಾಗಿ ವಿರೋಧಿಸಿಲ್ಲವಾದರೂ, ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಟ್ವೀಟ್ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ. ಅದೇ ಟ್ವೀಟ್‌ನಲ್ಲಿ, ಅವರ ಸಾರ್ವಜನಿಕ ಸೇವೆಯನ್ನು ರಾಷ್ಟ್ರ ಗುರುತಿಸಿದೆ, ಕಾಂಗ್ರೆಸ್‌ಗೆ ಅವರ ಸೇವೆ ಬೇಕಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಪಶ್ಮಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಜಿ ಅವರು ಪದ್ಮ ಭೂಷಣ ಪ್ರಶಸ್ತಿ ನಿರಾಕರಿಸಿದ್ದಾರೆ. ಈ ವಿಚಾರವನ್ನು ಅರವಿಂದ್ ಗುಣಶೇಖರ್ ಟ್ವೀಟ್ ಮಾಡಿದ್ದಾರೆ. ಅರವಿಂದ್ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಜೈರಾಮ್ ರಮೇಶ್, ಬುದ್ಧದೇವ್ ಅವರು ಸರಿಯಾದುದನ್ನೇ ಮಾಡಿದ್ದಾರೆ, ಅವರಿಗೆ ಆಜಾದಿ ಬೇಕಾಗಿದೆ. ಗುಲಾಮಗಿರಿಯಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಹೀಗೆ ಗುಲಾಂ ನಬಿ ಆಜಾದ್ ಅವರಿಗೆ ಪದ್ಮ ಪ್ರಶಸ್ತಿ ಘೋಷಿಸಿರುವ ವಿಚಾರ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಿಗೆ ಅಸಮಾಧಾನ ಉಂಟುಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.