ADVERTISEMENT

ಡಿಜಿಟಲ್‌ ದತ್ತಾಂಶ ಸಂರಕ್ಷಣಾ ಮಸೂದೆ ಸಾಮಾನ್ಯ ಮಸೂದೆ: ಸಚಿವ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 23:36 IST
Last Updated 3 ಆಗಸ್ಟ್ 2023, 23:36 IST
   

ನವದೆಹಲಿ: ಡಿಜಿಟಲ್‌ ದತ್ತಾಂಶ ಸಂರಕ್ಷಣಾ ಮಸೂದೆಯನ್ನು ಕೇಂದ್ರ ಸರ್ಕಾರವು ಹಣಕಾಸು ಮಸೂದೆಯಾಗಿ ವರ್ಗೀಕರಿಸಿದೆ ಎಂಬ ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ ಅವರ ಆರೋಪವನ್ನು ನಿರಾಕರಿಸಿರುವ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವನಿ ವೈಷ್ಣವ್‌, ಇದು ಸಾಮಾನ್ಯ ಮಸೂದೆ ಎಂದು ಸ್ಪಷ್ಟಪಡಿಸಿದ್ದಾರೆ.  

ದತ್ತಾಂಶ ಸಂರಕ್ಷಣಾ ಮಸೂದೆಯನ್ನು ಸಾಮಾನ್ಯ ಮಸೂದೆಯಾಗಿ ಪರಿಗಣಿಸಬೇಕು. ನಂತರ ಅದು ಜಂಟಿ ಸಂಸದೀಯ ಸಮಿತಿಯಲ್ಲಿ ಚರ್ಚೆಗೂ ಒಳಗಾಗಬೇಕು ಎಂದು ತಿವಾರಿ ಆಗ್ರಹಿಸಿದರು.    

ನಾಗರಿಕರ ದತ್ತಾಂಶ ಸಂಗ್ರಹಣೆ, ಸಂಸ್ಕರಣೆ ಮತ್ತು ಪ್ರಕ್ರಿಯೆಗೆ ಸಂಬಂಧಿಸಿದಂತೆ ಇಂಟರ್‌ನೆಟ್‌ ಕಂಪನಿಗಳು, ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ವ್ಯಾಪಾರ ಸಂಸ್ಥೆಗಳಂತಹ ಘಟಕಗಳನ್ನು ಹೆಚ್ಚು ಜವಾಬ್ದಾರರನ್ನಾಗಿಸುವ ಮತ್ತು ಉತ್ತರದಾಯಿಗಳನ್ನಾಗಿಸುವ ಗುರಿಯನ್ನು ಈ ಮಸೂದೆ ಹೊಂದಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.