ADVERTISEMENT

ಮೀಸಲಾತಿ | ಕಾಂಗ್ರೆಸ್‌‌ನಿಂದ ದ್ವಂದ್ವ ನೀತಿ: ಮಾಯಾವತಿ

ಪಿಟಿಐ
Published 24 ಸೆಪ್ಟೆಂಬರ್ 2024, 8:23 IST
Last Updated 24 ಸೆಪ್ಟೆಂಬರ್ 2024, 8:23 IST
ಮಾಯಾವತಿ
ಮಾಯಾವತಿ   

ಲಖನೌ: ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ದ್ವಂದ್ವ ನೀತಿಯನ್ನು ಅನುಸರಿಸುತ್ತಿದ್ದು, ಮೀಸಲಾತಿ ವಿರೋಧಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಕಿಡಿಕಾರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಕಾಂಗ್ರೆಸ್‌ ಪಕ್ಷವು ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಬಗೆಗಿನ ಹೇಳಿಕೆ ಸ್ಪಷ್ಟವಾಗಿಲ್ಲ. ನಮ್ಮ ದೇಶದಲ್ಲಿ ವೋಟ್‌ಬ್ಯಾಂಕ್‌ ರಾಜಕಾರಣಕ್ಕಾಗಿ ಮೀಸಲಾತಿ ಬಗ್ಗೆ ಮಾತನಾಡುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ವಿದೇಶದಲ್ಲಿ ಮೀಸಲಾತಿ ರದ್ದು ಕುರಿತು ಹೇಳಿಕೆ ನೀಡುತ್ತಾರೆ’ ಎಂದು ಮಾಯಾವತಿ ವ್ಯಂಗ್ಯವಾಡಿದ್ದಾರೆ.

‘ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಮಂಡಲ್ ಆಯೋಗದ ವರದಿಯನ್ನು ಜಾರಿಗೊಳಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ ಮಾಯಾವತಿ, ಜಾತಿ ಗಣತಿ ನಡೆಸುವಂತೆ ಧ್ವನಿ ಎತ್ತುವ ಕಾಂಗ್ರೆಸ್‌ ನಾಯಕರು, ತಾವು ಅಧಿಕಾರದಲ್ಲಿದ್ದಾಗ ಏಕೆ ಜಾತಿ ಗಣತಿ ನಡೆಸಲಿಲ್ಲ, ಎಲ್ಲವೂ ಕೇವಲ ಬೂಟಾಟಿಕೆ‘ ಎಂದು ಟೀಕಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.