ADVERTISEMENT

ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆ

ಇದೇ ಮೊದಲು ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2024, 12:53 IST
Last Updated 11 ಫೆಬ್ರುವರಿ 2024, 12:53 IST
.
.   

ನವದೆಹಲಿ: ಸಿಆರ್‌ಪಿಎಫ್‌, ಬಿಎಸ್‌ಎಫ್‌ ಮತ್ತು ಸಿಐಎಸ್‌ಎಫ್‌ನಂಥ ಅರೆಸೇನಾಪಡೆಗಳ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಫೆ.20ರಿಂದ ಮಾರ್ಚ್‌ 7ರವರೆಗೆ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಭಾನುವಾರ ತಿಳಿಸಿದೆ.

ದೇಶದಾದ್ಯಂತ ಸುಮಾರು 128 ನಗರಗಳಲ್ಲಿ 48 ಲಕ್ಷ ಆಕಾಂಕ್ಷಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಅದು ತಿಳಿಸಿದೆ.

ಹಿಂದಿ ಮತ್ತು ಇಂಗ್ಲಿಷ್‌ ಜೊತೆಗೆ ಕನ್ನಡ, ಅಸ್ಸಾಮಿ, ಗುಜರಾತಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪ್ರಶ್ನೆಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಪ್ರಾದೇಶಿಕ ಭಾಷೆಗಳಲ್ಲೂ ಇಂಥ ನೇಮಕಾತಿ ಪರೀಕ್ಷೆಗಳನ್ನು ನಡೆಸುವುದಾಗಿ ಕಳೆದ ವರ್ಷದ ಏಪ್ರಿಲ್‌ನಲ್ಲಿ ಘೋಷಿಸಲಾಗಿತ್ತು ಎಂದು ತಿಳಿಸಿದೆ.

ADVERTISEMENT

ಕೇಂದ್ರೀಯ ಪಡೆಗಳಲ್ಲಿ ಸ್ಥಳೀಯ ಯುವಜನರ ಭಾಗವಹಿಸುವಿಕೆ ಹೆಚ್ಚಿಸಬೇಕು ಮತ್ತು ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ನೀಡಬೇಕು ಎಂಬ ಗೃಹ ಸಚಿವ ಅಮಿತ್ ಶಾ ಅವರ ಆಶಯದಿಂದಾಗಿ ಈ ‘ಐತಿಹಾಸಿಕ ನಿರ್ಧಾರ’ ತೆಗೆದುಕೊಳ್ಳಲಾಗಿತ್ತು ಎಂದು ಹೇಳಿಕೆ ಮೂಲಕ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.