ADVERTISEMENT

ರಾಮ ಮಂದಿರ | 161 ಅಡಿ ಎತ್ತರದ ಗೋಪುರ ನಿರ್ಮಾಣ ಕಾರ್ಯ ಆರಂಭ

ಪಿಟಿಐ
Published 3 ಅಕ್ಟೋಬರ್ 2024, 14:02 IST
Last Updated 3 ಅಕ್ಟೋಬರ್ 2024, 14:02 IST
<div class="paragraphs"><p>ಅಯೋಧ್ಯೆ ರಾಮಮಂದಿರ</p></div>

ಅಯೋಧ್ಯೆ ರಾಮಮಂದಿರ

   

ಅಯೋಧ್ಯೆ (ಉತ್ತರ ಪ್ರದೇಶ): ರಾಮ ಮಂದಿರದ 161 ಅಡಿ ಎತ್ತರದ ಗೋಪುರ ನಿರ್ಮಾಣವು ಗುರುವಾರ ಆರಂಭಗೊಂಡಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದರು.

‘ಗೋಪುರ ನಿರ್ಮಾಣದ ಜೊತೆಯಲ್ಲಿಯೇ ಸಪ್ತ ಖುಷಿಗಳ ದೇವಾಲಯ ನಿರ್ಮಾಣದ ಕಾರ್ಯವೂ ತ್ವರಿತಗತಿಯಲ್ಲಿ ಮುಂದುವರಿದಿದೆ. ಇದು ಕೂಡ ನಾಲ್ಕು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ’ ಎಂದರು.

ADVERTISEMENT

‘ಮಂದಿರ ಸಂಕೀರ್ಣದಲ್ಲಿ ಬಾಕಿ ಉಳಿದಿರುವ ನಿರ್ಮಾಣ ಕಾರ್ಯಕ್ಕೆ ವೇಗ ತುಂಬಲು, ಮೂರು ದಿನಗಳ ಪರಿಶೀಲನಾ ಸಭೆಯು ಗುರುವಾರ ಆರಂಭಗೊಂಡಿದೆ. ನಿರ್ಮಾಣ ಕಾರ್ಮಿಕರ ಸಂಖ್ಯೆಯನ್ನು ಏರಿಸುವ ಸಂಬಂಧ ಹಾಗೂ ತಾಂತ್ರಿಕ ಸಿಬ್ಬಂದಿಯ ಅಗತ್ಯದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಅವರು ತಿಳಿಸಿದರು.

ಈ ವರ್ಷಾರಂಭದಲ್ಲಿ ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.