ಭದ್ರಕ್(ಒಡಿಶಾ): ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ವಿಷ ಮದ್ಯ ಸೇವಿಸಿ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದು, 29 ಮಂದಿ ಅಸ್ವಸ್ಥರಾಗಿದ್ದಾರೆ.
ರಾಜಕೀಯ ಪಕ್ಷಗಳು ನೀಡಿದ ಹಣದಿಂದ ಇವರು ಮದ್ಯ ಖರೀದಿಸಿದ್ದರು ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಉಮಾಕಾಂತ ಮೊಹರನ ಹೇಳಿದ್ದಾರೆ.
ತಿಹಿದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ದೌಲತ್‌ಪುರ್ ಗ್ರಾಮದ ಜನರು ಚುನಾವಣೆ ಮುಗಿದ ನಂತರ ಸಂಭ್ರಮಾಚರಣೆಗಾಗಿ ಸ್ಥಳೀಯ ಮಾರುಕಟ್ಟೆಯಿಂದ ಮದ್ಯ ಖರೀದಿಸಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಡಳಿತ ಆದೇಶ ನೀಡಿದೆ.
ಮದ್ಯ ಸೇವಿಸಿ ಸಾವು ಸಂಭವಿಸಿದ ಪ್ರಕರಣದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಭದ್ರಕ್ ಚಂದಬಲಿ ರಸ್ತೆ ತಡೆಯೊಡ್ಡಿ ವಾಹನ ದಟ್ಟಣೆಯುಂಟು ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.