ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಅಡಗಿರುವ ಭಯೋತ್ಪಾದಕನನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
ಕಥುವಾ ಕಾರ್ಯಾಚರಣೆ ಕುರಿತು ವಿವರಗಳನ್ನು ಹಂಚಿಕೊಂಡ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್, ‘ರಾತ್ರಿ 8 ರ ಸುಮಾರಿಗೆ ಸೈದಾ ಸುಖಲ್ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪರಿಚಿತರು ನೀರು ಕೇಳಿದ್ದಾರೆ. ಮನೆಯವರು ಭಯಭೀತರಾಗಿ ಪೊಲೀಸರಿಗೆ ಮಾಹಿತಿ ಪಡೆದ ನೀಡಿದ್ದಾರೆ. ಉಪವಿಭಾಗದ ಪೊಲೀಸ್ ಅಧಿಕಾರಿ ಮತ್ತು ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡವು ಗ್ರಾಮಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಹತ್ಯೆಗೀಡಾದ ಭಯೋತ್ಪಾದಕನ ಬಳಿಯಿಂದ ಎಕೆ ಅಸಾಲ್ಟ್ ರೈಫಲ್ ಮತ್ತು ರಕ್‌ಸಾಕ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅವರ ಗುರುತು ಮತ್ತು ಗುಂಪು ಸಂಬಂಧವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರದಂದು ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಮೇಲೆ ದಾಳಿ ನಡೆದ ನಂತರ ಈ ಘಟನೆಗಳು ಸಂಭವಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.