ಕಾಂಕೇರ್: ಛತ್ತೀಸಗಢದ ಕಾಂಕೇರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಹತ್ಯೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿದೂರ್ ಗ್ರಾಮ ಸಮೀಪದ ಕಾಡಿನಲ್ಲಿ ಈ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಇಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
‘ರಾಜ್ಯ ಪೊಲೀಸ್ ಘಟಕದ ಬಸ್ತರ್ ಫೈಟರ್ಸ್‌ಗೆ ಸೇರಿದ ಕಾನ್‌ಸ್ಟೆಬಲ್ ರಮೇಶ್ ಕುರೇತಿ ಎನ್‌ಕಂಟರ್‌ನಲ್ಲಿ ಮೃತಪಟ್ಟಿದ್ದಾರೆ. ನಕ್ಸಲ್‌ನ ಮೃತದೇಹ ದೊರೆತ ಸ್ಥಳದಲ್ಲಿ ಸಿಕ್ಕ ಎಕೆ–47 ರೈಫಲ್ ವಶಪಡಿಸಿಕೊಳ್ಳಲಾಗಿದೆ. ಹಿದೂರ್ ಅರಣ್ಯದಲ್ಲಿ ನಕ್ಸಲರಿರುವ ಖಚಿತ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಶೋಧ ಮುಂದುವರಿದಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.