ADVERTISEMENT

ಕಥುವಾ, ದೋಡಾದಲ್ಲಿ ದಾಳಿ: ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದ ಪೊಲೀಸರು

ಏಜೆನ್ಸೀಸ್
Published 13 ಜೂನ್ 2024, 2:38 IST
Last Updated 13 ಜೂನ್ 2024, 2:38 IST
   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ದಾಳಿ ನಡೆಸಿರುವ ಭಯೋತ್ಪಾದಕರ ರೇಖಾ ಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಿಸಿದ್ದಾರೆ.

ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭಾರಿ ಪ್ರಮಾಣದ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಸಿಆರ್‌ಪಿಎಫ್‌ ಯೋಧರೊಬ್ಬರು ಹುತಾತ್ಮರಾಗಿದ್ದು, ಭದ್ರತಾ ಪಡೆಯ ಆರು ಸಿಬ್ಬಂದಿಗೆ ಗಾಯಗೊಂಡಿದ್ದರು.

ಸೈದಾ ಸುಖಲ್‌ ಗ್ರಾಮದಲ್ಲಿ (ಅಂತರರಾಷ್ಟ್ರೀಯ ಗಡಿಯಿಂದ 60 ಕಿ.ಮೀ ದೂರದಲ್ಲಿದೆ) ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳ ವಾಹನಗಳ ಮೇಲೆ ಬುಲೆಟ್‌ ದಾಳಿಯನ್ನೂ ನಡೆಸಿದರು. ಅದೃಷ್ಟವಶಾತ್‌ ಇಬ್ಬರು ಹಿರಿಯ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ಮತ್ತೊಂದೆಡೆ, ದೋಡಾ ಜಿಲ್ಲೆಯ ಭದರ್ವಾ–ಪಠಾಣ್‌ಕೋಟ್‌ ಹೆದ್ದಾರಿಯ ಚಟರ್ಗಲ್ಲಾ ಪ್ರದೇಶದ ಚೆಕ್‌ಪೋಸ್ಟ್‌ ಮೇಲೆ ಭಯೋತ್ಪಾದಕರು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ರೈಫಲ್ಸ್‌ನ ಐವರು ಯೋದರು ಮತ್ತು ವಿಶೇಷ ಪೊಲೀಸ್‌ ಅಧಿಕಾರಿ (ಎಸ್‌ಪಿಒ) ಗಾಯಗೊಂಡಿದ್ದರು.

ಇದೀಗ ನಾಲ್ವರು ಉಗ್ರರ ರೇಖಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಸುಳಿವು ನೀಡಿದವರಿಗೆ ₹20 ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.