ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 6,767 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. 147 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಬೆಳಿಗ್ಗೆ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,31,868ಕ್ಕೆ ಏರಿಕೆಯಾಗಿದೆ. ಈವರೆಗೆ 3,867 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 54,440 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 73,560 ಮಂದಿ ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 47,190 ಜನರಿಗೆ ಈವರೆಗೆ ಸೋಂಕು ತಗುಲಿದ್ದು, 1,577 ಜನ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 15,512 ಜನರಿಗೆ ಸೋಂಕು ತಗುಲಿ 103 ಜನ ಸಾವಿಗೀಡಾಗಿದ್ದಾರೆ. ಗುಜರಾತ್‌ನಲ್ಲಿ 13,664 ಮತ್ತು ದೆಹಲಿಯಲ್ಲಿ 12,910 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಈ ಎರಡೂ ರಾಜ್ಯಗಳಲ್ಲಿ ಕ್ರಮವಾಗಿ 829 ಮತ್ತು 231 ಜನ ಮೃತಪಟ್ಟಿದ್ದಾರೆ.
ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಇದು ಮೇ 31ರ ವರೆಗೂ ಇರಲಿದೆ. ಈ ಅವಧಿಯಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಅಂಕೆಗೆ ಸಿಗದ ಕೊರೊನಾ ಸೋಂಕು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.