ADVERTISEMENT

Covid-19 India Update | ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 2682, 116 ಸಾವು

ಏಜೆನ್ಸೀಸ್
Published 29 ಮೇ 2020, 16:59 IST
Last Updated 29 ಮೇ 2020, 16:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾವೈರಸ್‌ನಿಂದಾಗಿ ದೇಶದಾದ್ಯಂತ ಸಾವಿಗೀಡಾದವರ ಸಂಖ್ಯೆ 4706ಕ್ಕೆ ತಲುಪಿದೆ. ಒಟ್ಟು 89987 ಸಕ್ರಿಯ ಪ್ರಕರಣಗಳಿವೆ. ಈವರೆಗೆ 71105 ಮಂದಿ ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಶುಕ್ರವಾರ 116 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 2098 ಆಗಿದೆ.ಅದೇ ವೇಳೆ 2682 ಹೊಸ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 62228ಕ್ಕೇರಿದೆ.

ಪಶ್ಚಿಮ ಬಂಗಾಳದ ಸಚಿವ ಸುಜಿತ್ ಬೋಸ್ ಅವರಿಗೆ ಕೋವಿಡ್-19 ರೋಗ ದೃಢಪಟ್ಟಿದೆ. ಅವರಲ್ಲಿ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗಾಗಿ ಮನೆಯೊಳಗೆಯೇ ಕ್ವಾರಂಟೈನ್‌ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ.

ADVERTISEMENT

ಮುಂಬೈಯ ಧಾರಾವಿಯಲ್ಲಿ ಇವತ್ತು ಯಾವುದೇ ಸಾವು ವರದಿಯಾಗಿಲ್ಲ. 41 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲೀಗ ಸೋಂಕಿತರ ಸಂಖ್ಯೆ 1715 ಆಗಿದೆ. ಇಲ್ಲಿಯವರೆಗೆ ಸಾವಿನ ಸಂಖ್ಯೆ 61 ಆಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹೇಳಿದೆ.
ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 20,000 ಗಡಿದಾಟಿದೆ. ಶುಕ್ರವಾರ ಒಂದೇ ದಿನ ಇಲ್ಲಿ 874 ಸೋಂಕಿತರು ಪತ್ತೆಯಾಗಿದ್ದಾರೆ.

ಕೇರಳದಲ್ಲಿ 62 ಹೊಸ ಪ್ರಕರಣಗಳು ದಾಖಲಾಗಿವೆ. ಶುಕ್ರವಾರ 1 ಸಾವು ವರದಿಯಾಗಿದ್ದು 1150 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ. ಪಂಜಾಬ್‌ನಲ್ಲಿ ಮಾಸ್ಕ್ ಧರಿಸದೇ ಇದ್ದರೆ ಉಗುಳಿದರೆ 500 ದಂಡ ವಿಧಿಸಲಾಗಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 7,4466 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ. 175 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.