ADVERTISEMENT

ಕೊರೊನಾ ಪರಿಣಾಮ: ಎನ್‌ಪಿಆರ್ ಪರಿಷ್ಕರಣೆ ಮುಂದೂಡಿದ ಕೇಂದ್ರ ಸರ್ಕಾರ

ಏಜೆನ್ಸೀಸ್
Published 25 ಮಾರ್ಚ್ 2020, 11:42 IST
Last Updated 25 ಮಾರ್ಚ್ 2020, 11:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ.

2021ರ ಮೊದಲ ಹಂತದ ಜನಗಣತಿ ಮತ್ತು ಎನ್‌ಪಿಆರ್‌ ಅನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕೊವಿಡ್‌–19 ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್‌ನಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಇತ್ತೀಚೆಗೆ ಒತ್ತಾಯಿಸಿದ್ದವು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.