ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭಾರತದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಮುಂದಿರುವ ಎರಡು ಬಹುಮುಖ್ಯ ಸವಾಲಿನ ಬಗ್ಗೆ ಎಚ್ಚರಿಸಿದರು.
ದೆಹಲಿಯ ಕೆಂಪು ಕೋಟೆ ಮೇಲೆ ಸತತ 9ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶವನ್ನು ಉದ್ದೇಶಿಸಿ ಮಾತನಾಡಿದರು.
‘ಇಂದು ನಾವು ಎರಡು ದೊಡ್ಡ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಭ್ರಷ್ಟಾಚಾರ ಮತ್ತು 'ಪರಿವಾರವಾದ' ಅಥವಾ ಸ್ವಜನಪಕ್ಷಪಾತ. ಭ್ರಷ್ಟಾಚಾರ ದೇಶವನ್ನು ಗೆದ್ದಲಿನಂತೆ ಟೊಳ್ಳು ಮಾಡುತ್ತಿದೆ. ನಾವು ಅದರ ವಿರುದ್ಧ ಹೋರಾಡಬೇಕಾಗಿದೆ. ಈ ಹೋರಾಟದಲ್ಲಿ ನಾನು ಎಲ್ಲಾ ಭಾರತೀಯರ ಬೆಂಬಲವನ್ನು ಕೋರುತ್ತೇನೆ. ನಮ್ಮ ಸಂಸ್ಥೆಗಳ ಶಕ್ತಿಯನ್ನು ಅರಿತುಕೊಳ್ಳಲು, ಅರ್ಹತೆಯ ಆಧಾರದ ಮೇಲೆ ದೇಶವನ್ನು ಮುನ್ನಡೆಸಲು 'ಪರಿವಾರವಾದ'ದ ವಿರುದ್ಧ ನಾವು ಜಾಗೃತಿ ಮೂಡಿಸಬೇಕಿದೆ ಎಂದು ಮೋದಿ ಹೇಳಿದರು.
ಕೆಲವರು ತಮ್ಮ ಅಕ್ರಮ ಸಂಪತ್ತನ್ನು ರಕ್ಷಿಸಿಕೊಳ್ಳುವ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದರು.
ಭಾರತ ಬಡತನದ ವಿರುದ್ಧ ಹೋರಾಡುತ್ತಿವೆ. ಹೀಗಾಗಿ ಭ್ರಷ್ಟಾಚಾರದ ವಿರುದ್ಧವೂ ನಾವು ನಮ್ಮೆಲ್ಲ ಶಕ್ತಿಯಿಂದ ಹೋರಾಡಬೇಕಾಗಿದೆ ಎಂದು ಅವರು ತಿಳಿಸಿದರು.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.