ನವದೆಹಲಿ: ಛತ್ತೀಸಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯು 104 ಪುಟಗಳ ಆರೋಪಪಟ್ಟಿಯನ್ನು ಬಿಡುಗಡೆ ಮಾಡಿದೆ. ದೊಡ್ಡ ಪ್ರಮಾಣದ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಹಗರಣಗಳು ಸರ್ಕಾರದ ಕೊಡುಗೆಗಳು ಎಂದು ಟೀಕಿಸಿದೆ.
ವಿಧಾನಸಭೆಯ ಕಳೆದ ಚುನಾವಣೆಯಲ್ಲಿ ಪಕ್ಷ ನೀಡಿದ್ದ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರು ವಿವಿಧ ವೇದಿಕೆಗಳಲ್ಲಿ ನೀಡಿದ್ದ 316 ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಮಂಗಳವಾರ ಟೀಕಿಸಿದರು.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಾಫಿಯಾ ಮತ್ತು ಕ್ರಿಮಿನಲ್‌ಗಳಿಗೆ ಮುಕ್ತ ವಾತಾವರಣವಿದೆ. 5,900 ಅತ್ಯಾಚಾರ ಪ್ರಕರಣಗಳನ್ನು ಸರ್ಕಾರ ಕಡೆಗಣಿಸಿದೆ. ಇದು, ಛತ್ತೀಸಗಢದಲ್ಲಿರುವ ಕಾಂಗ್ರೆಸ್ ಪಕ್ಷದ ನಿಜವಾದ ಮುಖವಾಗಿದೆ’ ಎಂದು ಟೀಕಿಸಿದರು.
ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಸಾಧನೆ ಉಲ್ಲೇಖಿಸಿದ ಅವರು, ರಾಜ್ಯದಲ್ಲಿ ಮದ್ಯಮಾರಾಟವನ್ನು ಶೇ 100ರಷ್ಟು ನಿಷೇಧಿಸಲಾಗುವುದು ಎಂದು ರಾಹುಲ್‌ಗಾಂಧಿ ಹೇಳಿದ್ದರು. ಆದರೆ, ಇಲ್ಲಿ ಅಂದಾಜು ₹ 2000 ಕೋಟಿ ಮೊತ್ತದ ಮದ್ಯದ ಹಗರಣ ನಡೆದಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.