ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತೀಯ ವಿಮಾನಯಾನ ವಲಯದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ದೀಪಕ್ ತಲ್ವಾರ್ ಅವರ ಜಾಮೀನು ಅರ್ಜಿ ವಜಾಗೊಳಿಸಿರುವ ವಿಶೇಷ ಕೋರ್ಟ್, ಆತನ ಪುತ್ರ ಆದಿತ್ಯ ತಲ್ವಾರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಈ ಇಬ್ಬರ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಸಲ್ಲಿಸಿದ್ದ ದೋಷಾರೋಪ ಪಟ್ಟಿ ಪರಿಶೀಲನೆ ಬಳಿಕವಿಶೇಷ ನ್ಯಾಯಾಲಯವು ಬುಧವಾರ ತೀರ್ಪು ನೀಡಿದೆ.
ದೀಪಕ್ ತಲ್ವಾರ್ ವಿರುದ್ಧ ತನಿಖೆ ನಡೆಸುವಂತೆ ಏಪ್ರಿಲ್ 29ರಂದು ಕೋರ್ಟ್ ಸೂಚನೆ ನೀಡಿತ್ತು ಎಂದು ಇ.ಡಿ ತಿಳಿಸಿತ್ತು. ಆದರೆ, ವಿದೇಶದಲ್ಲಿರುವ ದೀಪಕ್‌ಗೆ ಹಲವು ಬಾರಿ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.