ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ತೆಲಂಗಾಣದ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ7ರವರೆಗೆ ವಿಸ್ತರಿಸಿ ಆದೇಶಿಸಿದೆ.
ಕೇಜ್ರಿವಾಲ್ ಮತ್ತು ಕವಿತಾ ಅವರ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ವಿಡಿಯೊ ಕಾನ್ಪರೆನ್ಸ್ ಮೂಲಕ ಈ ಇಬ್ಬರನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಾದ ಪ್ರತಿವಾದ ಆಲಿಸಿದ ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಮೇ 7ರವರೆಗೆ ಇಬ್ಬರ ಬಂಧನದ ಅವಧಿ ವಿಸ್ತರಿಸಿದರು.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ ಆರೋಪದಡಿ ಅರವಿಂದ ಕೇಜ್ರಿವಾಲ್ ಮತ್ತು ಕೆ. ಕವಿತಾ ಅವರನ್ನು ಬಂಧನವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.