ನವದೆಹಲಿ: ಇಲ್ಲಿನ ಖಾನ್ ಚಾಚಾ ರೆಸ್ಟೋರಂಟ್‌ನಲ್ಲಿ ಆಮ್ಲಜನಕ ಸಿಲಿಂಡರ್ ಜಪ್ತಿ ಮಾಡಿದ್ದ ಪ್ರಕರಣದ ಸಂಬಂಧ ಉದ್ಯಮಿ ನವನೀತ್ ಕಲ್ರಾ ಅವರಿಗೆ ದೆಹಲಿ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಗರ್ಗ್ ಅವರು, ಈ ಅವಧಿಯಲ್ಲಿ ತಮ್ಮಿಂದ ಆಮ್ಲಜನಕ ಸಿಲಿಂಡರ್ ಖರೀದಿಸಿದ್ದ ಗ್ರಾಹಕರನ್ನು ಭೇಟಿಯಾಗಬಾರದು, ಸಾಕ್ಷ್ಯ ನಾಶಪಡಿಸಲು, ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಬಾರದು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿತು.
ಇತ್ತೀಚೆಗೆ ನಡೆದ ದಾಳಿಯಲ್ಲಿ ಕಲ್ರಾ ಅವರ ಮಾಲೀಕತ್ವದ ಖಾನ್ ಚಾಚಾ, ಟೌನ್‌ಹಾಲ್ ಮತ್ತು ನೆಗೆ ಅಂಡ್ ಜು ರೆಸ್ಟೋರಂಟ್‌ಗಳ ಮೇಲೆ ದಾಳಿ ನಡೆಸಿ ಪೊಲೀಸರು 524 ಆಮ್ಲಜನಕ ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದರು. ಇವುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ದಾಸ್ತಾನು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.