ADVERTISEMENT

ಮಾಜಿ ಸಿಎಂ ಚೌಹಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಕೋರ್ಟ್ ಆದೇಶ

ಪಿಟಿಐ
Published 21 ಜನವರಿ 2024, 4:34 IST
Last Updated 21 ಜನವರಿ 2024, 4:34 IST
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್   

ಜಬಲ್‌ಪುರ: ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ ಶರ್ಮಾ, ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಮಾಜಿ ಸಚಿವ ಭೂಪೇಂದ್ರ ಸಿಂಗ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಜಬಲ್‌ಪುರದ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿದೆ.

ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ವಿವೇಕ್ ಟಂಕಾ ಅವರ ಅರ್ಜಿಯ ಮೇರೆಗೆ ನ್ಯಾಯಾಲಯ ಈ ಆದೇಶ ನೀಡಿದೆ.

ಅರ್ಜಿ ವಿಚಾರಣೆ ವೇಳೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಗಮನಿಸಿದ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲು ನ್ಯಾಯಾಧೀಶರಾದ ವಿಶ್ವೇಶ್ವರಿ ಮಿಶ್ರಾ ಅವರು ಆದೇಶದಲ್ಲಿ ತಿಳಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಎಚ್‌.ಎಸ್ ಛಾಬ್ರಾ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ADVERTISEMENT

ಕಳೆದ ವರ್ಷ ಏಪ್ರಿಲ್ 29ರಂದು, ಟಂಕಾ ಅವರು ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ತಮ್ಮ ಪ್ರಾಥಮಿಕ ಹೇಳಿಕೆಯನ್ನು ದಾಖಲಿಸಿದ್ದರು. ಬಿಜೆಪಿ ನಾಯಕರು ತಮ್ಮ ವರ್ಚಸ್ಸು ಹಾಳು ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದರು.

2021ರ ಪಂಚಾಯತ್ ಚುನಾವಣೆಗಳಲ್ಲಿ ಇತರೆ ಹಿಂದುಳಿದ ವರ್ಗ (ಒಬಿಸಿ) ಕೋಟಾಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ ಪ್ರಕರಣದಲ್ಲಿ ಟಂಕಾ ಭಾಗಿಯಾಗಿದ್ದಾರೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಬಿಜೆಪಿ ನಾಯಕರು ತಮ್ಮ ಇಮೇಜ್‌ಗೆ ಕಳಂಕ ತಂದಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರೂ ಆದ ಟಂಕಾ ಆರೋಪಿಸಿದ್ದಾರೆ.

ಒಬಿಸಿ ಮೀಸಲಾತಿಗೆ ಸಂಬಂಧಿಸಿದ ಯಾವುದೇ ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ನಾನು ಭಾಗವಹಿಸಿಲ್ಲ. ಈ ವಿಷಯದ ಬಗ್ಗೆ ಯಾವುದೇ ಅರ್ಜಿಯನ್ನು ಸಲ್ಲಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅಲ್ಲದೇ ಶರ್ಮಾ, ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಭೂಪೇಂದ್ರ ಸಿಂಗ್ ವಿರುದ್ಧ ₹ 10 ಕೋಟಿಯ ಸಿವಿಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.