ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿತ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿಯ ವಿಶೇಷ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.
ಎನ್‌ಸಿಪಿ ಮುಖಂಡರಾಗಿರುವ ದೇಶ್‌ಮುಖ್ ಅವರನ್ನು ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ನವೆಂಬರ್ 2 ರಂದು ಬಂಧಿಸಿತ್ತು. ಈಗ ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಅಕ್ರಮ ಹಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯವು ತನಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲು ಇಡಿ ಸಲ್ಲಿಸಿದ ದೋಷಾರೋಪ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಆದರೆ ವಿಶೇಷ ನ್ಯಾಯಾಧೀಶ ಆರ್.ಎನ್.ರೋಕಡೆ ದೇಶ್‌ಮುಖ್ ಮನವಿಯನ್ನು ತಳ್ಳಿ ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.