ADVERTISEMENT

ಕೇಜ್ರಿವಾಲ್ ವಿರುದ್ಧ ಪೂರಕ ದೋಷಾರೋಪ ಪಟ್ಟಿ: ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಪಿಟಿಐ
Published 28 ಮೇ 2024, 12:54 IST
Last Updated 28 ಮೇ 2024, 12:54 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಪೂರಕ ದೋಷಾರೋಪಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೇ ಎಂಬ ಕುರಿತ ಆದೇಶವನ್ನು ದೆಹಲಿಯ ನ್ಯಾಯಾಲಯವೊಂದು ಕಾಯ್ದಿರಿಸಿದೆ. ಆದೇಶವನ್ನು ಜೂನ್‌ 4ಕ್ಕೆ ನೀಡಲಿದೆ.

ADVERTISEMENT

ಇ.ಡಿ ವಕೀಲರ ವಾದವನ್ನು ಆಲಿಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಆದೇಶವನ್ನು ಕಾಯ್ದಿರಿಸಿದರು. ಕೇಜ್ರಿವಾಲ್ ಅವರ ವಿರುದ್ಧ ಕ್ರಮ ಜರುಗಿಸಲು ಅಗತ್ಯ ಪುರಾವೆಗಳು ಇವೆ ಎಂದು ಇ.ಡಿ. ಹೇಳಿದೆ. ದೋಷಾರೋಪ ಪಟ್ಟಿಯಲ್ಲಿ ಆಮ್ ಆದ್ಮಿ ಪಕ್ಷವನ್ನೂ ಆರೋಪಿ ಎಂದು ಹೆಸರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.