ADVERTISEMENT

Covid-19 India Update: 24 ಗಂಟೆಗಳಲ್ಲಿ 22,771 ಜನರಿಗೆ ಸೋಂಕು, 442 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜುಲೈ 2020, 6:37 IST
Last Updated 4 ಜುಲೈ 2020, 6:37 IST
   

ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 22,771 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ. 442 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 6,48,315 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 18,655ಕ್ಕೆ ಏರಿಕೆಯಾಗಿದೆ.

ಸದ್ಯ 2,35,433 ಪ್ರಕರಣಗಳು ಸಕ್ರಿಯವಾಗಿದ್ದು, 3,94,227 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ADVERTISEMENT

ಕೋವಿಡ್‌-19ನಿಂದ ತೀವ್ರ ಹೊಡೆತಕ್ಕೆ ಸಿಲುಕಿ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,92,990 ಪ್ರಕರಣಗಳು ಬೆಳಕಿಗೆ ಬಂದಿದ್ದು, 79,927 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 1,04,687 ಮಂದಿ ಗುಣಮುಖರಾಗಿದ್ದು, 8,376 ಜನರು ಮೃತರಾಗಿದ್ದಾರೆ.

ಗುಜರಾತ್‌ನಲ್ಲಿ ಒಟ್ಟಾರೆ 34,600 ಜನರಿಗೆ ಸೋಂಕು ತಗುಲಿದೆ. 7,763 ಸಕ್ರಿಯ ಪ್ರಕರಣಗಳಿದ್ದು, 24,933 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,904 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 94,695 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 26,148 ಸಕ್ರಿಯ ಪ್ರಕರಣಗಳಿದ್ದು, 65,624 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,923 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಒಟ್ಟಾರೆ 1,02,721 ಮಂದಿಗೆ ಸೋಂಕು ತಗುಲಿದ್ದು, 42,958 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 58,378 ಗುಣಮುಖರಾಗಿದ್ದು, 1,385 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 593, ಪಶ್ಚಿಮ ಬಂಗಾಳದಲ್ಲಿ 717, ಉತ್ತರ ಪ್ರದೇಶದಲ್ಲಿ 749, ರಾಜಸ್ತಾನದಲ್ಲಿ 440 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.