ನವದೆಹಲಿ: ಪಂಜಾಬ್‌ನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪ್ರಕಟಿಸಿದ್ದಾರೆ. 5ನೇ ತರಗತಿ, 8ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದೆಯೇ ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ.
ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಪಂಜಾಬ್ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. 12ನೇ ತರಗತಿಯ ಪಿಎಸ್‌ಇಬಿ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಪ್ರಕಟಿಸಿದೆ.
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸುವಂತೆ ಸಿಎಂ ಅಮರಿಂದರ್ ಸಿಂಗ್ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಬುಧವಾರ ಕೇಂದ್ರದ ಉನ್ನತ ಮಟ್ಟದ ಸಭೆಯಲ್ಲಿ 10ನೇ ತರಗತಿ ಪರೀಕ್ಷೆ ರದ್ದು ಪಡಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪಂಜಾಬ್‌ನಲ್ಲಿ ಬುಧವಾರ 3,329 ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 63 ಮಂದಿ ಸಾವಿಗೀಡಾಗಿದ್ದಾರೆ.
ಇನ್ನಷ್ಟು ಓದು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.