ನವದೆಹಲಿ: ವಿಧಾನಸಭೆಗೆ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಭೌತಿಕ ರ‍್ಯಾಲಿಗಳು ಮತ್ತು ರೋಡ್ ಶೋಗಳಿಗೆ ಇದ್ದ ನಿಷೇಧವನ್ನು ಚುನಾವಣಾ ಆಯೋಗವು ಜನವರಿ 31ರವರೆಗೆ ವಿಸ್ತರಿಸಿದೆ.
ಆದರೆ, ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಪಕ್ಷಗಳು ಮತ್ತು ಅಭ್ಯರ್ಥಿಗಳು ಜನವರಿ 28ರಿಂದ ಮತ್ತು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಪಕ್ಷಗಳು ಮತ್ತು ಅಭ್ಯರ್ಥಿಗಳು ಫೆ. 1ರಿಂದ ಬಹಿರಂಗ ಪ್ರಚಾರ ನಡೆಸಬಹುದು ಎಂದು ಶನಿವಾರ ಹೇಳಿದೆ.
ಮನೆ ಮನೆ ಪ್ರಚಾರದಲ್ಲಿ ಈವರೆಗೆ ಐವರಿಗೆ ಮಾತ್ರ ಅವಕಾಶ ಇತ್ತು. ಈ ಸಂಖ್ಯೆಯನ್ನು 10ಕ್ಕೆ ಏರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.