ADVERTISEMENT

Covid India Update: 1,033 ಹೊಸ ಪ್ರಕರಣ, 43 ಸಾವು

ಪಿಟಿಐ
Published 7 ಏಪ್ರಿಲ್ 2022, 4:54 IST
Last Updated 7 ಏಪ್ರಿಲ್ 2022, 4:54 IST
   

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 1,033 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 4,30,31,958ಕ್ಕೆ ಏರಿದೆ. ಸದ್ಯ, 11,639 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಒಂದೇ ದಿನ 43 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,21,530ಕ್ಕೆ ಏರಿದೆ.

ಒಟ್ಟು ಸೋಂಕಿತರ ಪೈಕಿ 0.03 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.76 ರಷ್ಟಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.