ನವದೆಹಲಿ: ಭಾರತದಲ್ಲಿ ಕೋವಿಡ್ 19 ಸಮುದಾಯವಾಗಿ ಹರಡುತ್ತಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಭಾರತವು ಸಮುದಾಯದಲ್ಲಿ ಹರಡುವ ಹಂತ ತಲುಪಿದೆ ಎಂದು ದೃಶ್ಯ ಮಾಧ್ಯಮಗಳಲ್ಲಿ ತೋರಿಸುತ್ತಿದ್ದಾರೆ. ಆದರೆ, ಇದನ್ನು ಸರಿಯಾದ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಭಾರತ ಜನಸಂಖ್ಯೆಯಲ್ಲಿ ಪ್ರಪಂಚದ ಎರಡನೇ ಅತಿ ದೊಡ್ಡ ದೇಶವಾಗಿದೆ. ಇಲ್ಲಿ ಒಂದು ಮಿಲಿಯನ್‌ಗೆ 538 ಪ್ರಕರಣಗಳು ವರದಿಯಾಗಿವೆ. ಇಡೀ ಪ್ರಪಂಚದಲ್ಲಿ ಒಂದು ಮಿಲಿಯನ್‌ಗೆ 1,453 ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ಭಾರತದ ಈ ಹಂತಕ್ಕೆ ತಲುಪಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಇಂದು ನಾನು ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ತಜ್ಞರು, ಸಂಬಂಧ ಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಸಂದರ್ಭದಲ್ಲಿ ದೇಶದ ಕೆಲವು ಘಟಕಗಳಲ್ಲಿ ಮಾತ್ರ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿರಬಹುದು. ಆದರೆ, ದೇಶದೆಲ್ಲೆಡೆ ಆ ಪರಿಸ್ಥಿತಿ ಇಲ್ಲ. ಕೊರೊನಾ ಭಾರತದಲ್ಲಿ ಸಮುದಾಯಕ್ಕೆ ಹರಡುವ ಹಂತಕ್ಕೆ ತಲುಪಿಲ್ಲ ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.