ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್–19 ದೃಢಪಟ್ಟ 24,879 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 7,67,296 ತಲುಪಿದೆ.
ಕೊರೊನಾ ಸೋಂಕಿನಿಂದ ಒಂದೇ ದಿನ 487 ಮಂದಿ ಸಾವಿಗೀಡಾಗಿದ್ದು, ಈವರೆಗೂ ಕೋವಿಡ್‌ನಿಂದ 21,129 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 2,69,789 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 4,76,378 ಜನ ಗುಣಮುಖರಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದ ಹೊಸ ಹಾಟ್‌ಸ್ಪಾಟ್‌ಗಳಾಗಿ ಬಿಂಬಿತವಾಗುತ್ತಿರುವ ತೆಲಂಗಾಣ ಮತ್ತು ಕರ್ನಾಟಕದಲ್ಲೂ ಸೋಂಕು ಪ್ರಕರಣಗಳು ಏರಿಕೆಯಾಗಿದೆ. ಕರ್ನಾಟಕದಲ್ಲಿ ಒಟ್ಟು 28,877 ಪ್ರಕರಣಗಳು ದಾಖಲಾಗಿದ್ದು, 470 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 16,531 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 11,876 ಮಂದಿ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 11,933 ಸಕ್ರಿಯ ಪ್ರಕರಣಗಳಿದ್ದು, 17,279 ಗುಣಮುಖರಾಗಿದ್ದಾರೆ. ಒಟ್ಟು 29,536 ಪ್ರಕರಣಗಳು ದಾಖಲಾಗಿದ್ದು, 324 ಮಂದಿ ಸಾವಿಗೀಡಾಗಿದ್ದಾರೆ.
ತಮಿಳುನಾಡಿನಲ್ಲಿ ಒಟ್ಟಾರೆ 1,22,350 ಮಂದಿಗೆ ಸೋಂಕು ತಗುಲಿದ್ದು, 46,483 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 74,167 ಮಂದಿ ಗುಣಮುಖರಾಗಿದ್ದು, 1,700 ಮಂದಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಒಟ್ಟಾರೆ 1,04,864 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 23,452 ಸಕ್ರಿಯ ಪ್ರಕರಣಗಳಿದ್ದು, 78,199 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 3,213 ಮಂದಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.