ನವದೆಹಲಿ: ನೀಟ್ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಪಿಎಂ ಆಗ್ರಹಿಸಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಎಂ ಪಾಲಿಟ್ ಬ್ಯೂರೊ, ‘ರಾಷ್ಟ್ರಮಟ್ಟದ ಪರೀಕ್ಷಾ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಕೆಟ್ಟ ಬೆಳವಣಿಗೆಗಳಿಂದ ತೀವ್ರ ನೋವಾಗಿದೆ’ ಎಂದು ಹೇಳಿದೆ.
ನೀಟ್ ಪಿಜಿ, ಯುಜಿಸಿ ನೆಟ್ ಪರೀಕ್ಷೆಗಳು ರದ್ದಾಗಿರುವುದು ಸೇರಿದಂತೆ ಪರೀಕ್ಷೆಗೆ ಸಂಬಂಧಿಸಿದ ವಿಚಾರಗಳನ್ನು ಪ್ರಸ್ತಾಪಿಸಿರುವ ಕಮ್ಯುನಿಸ್ಟ್ ಪಕ್ಷ, ‘ಈ ಅಕ್ರಮಗಳು ಮತ್ತು ಪರೀಕ್ಷಾ ಪ್ರಕ್ರಿಯೆಯ ವೈಫಲ್ಯವು ದೇಶದ ಉನ್ನತ ಶಿಕ್ಷಣದ ಪ್ರಮುಖ ವಲಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ’ ಎಂದು ಹೇಳಿದೆ.
‘ಕೇವಲ ಭ್ರಷ್ಟಾಚಾರದ ಕಾರಣಕ್ಕೆ ಇದೆಲ್ಲ ಆಗುತ್ತಿಲ್ಲ. ಹೊಸ ಶಿಕ್ಷಣ ನೀತಿಯ ಭಾಗವಾದ ಶಿಕ್ಷಣದ ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣವೂ ಇದಕ್ಕೆ ಕಾರಣ’ ಎಂದು ಸಿಪಿಎಂ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.