ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ (ಯುಎಪಿಎ), ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಂತಹ (ಪಿಎಂಎಲ್‌ಎ) ಕಠಿಣ ಕಾನೂನುಗಳನ್ನು ರದ್ದುಗೊಳಿಸುವ ಭರವಸೆ ನೀಡಿರುವ ಚುನಾವಣಾ ಪ್ರಣಾಳಿಕೆಯನ್ನು ಸಿಪಿಎಂ ಗುರುವಾರ ಬಿಡುಗಡೆ ಮಾಡಿದೆ.
ಬಿಜೆಪಿಯನ್ನು ಸೋಲಿಸಿ ಎಡರಂಗವನ್ನು ಬಲಪಡಿಸಬೇಕು ಮತ್ತು ಕೇಂದ್ರದಲ್ಲಿ ಪರ್ಯಾಯ ಜಾತ್ಯತೀತ ಸರ್ಕಾರ ಆಡಳಿತಕ್ಕೆ ಬರುವುದನ್ನು ಖಾತರಿಪಡಿಸಿಕೊಳ್ಳಿ ಎಂದು ಸಿಪಿಎಂ ಜನರಿಗೆ ಕರೆ ನೀಡಿದೆ.
ನರೇಗಾ ಯೋಜನೆಯನ್ನು ಸದೃಢಗೊಳಿಸುವ ಮತ್ತು ಪೌರತ್ವ ನೋಂದಣಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸುವ ಭರವಸೆಯನ್ನೂ ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.