ADVERTISEMENT

ಜಾಮಿಯಾ ವಿವಿ ಮೇಲಿನ ದಾಳಿ ಜಲಿಯನ್‌ವಾಲಾ ಬಾಗ್‌ ದುರಂತ ನೆನಪಿಸುತ್ತಿದೆ: ಉದ್ದವ್‌

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 9:48 IST
Last Updated 17 ಡಿಸೆಂಬರ್ 2019, 9:48 IST
   

ನವದೆಹಲಿ: ಇಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಮೇಲೆ ನಡೆದ ಪೊಲೀಸ್‌ ದಾಳಿ ಜಲಿಯನ್‌ವಾಲಾ ಬಾಗ್‌ ಹತ್ಯಾಕಾಂಡವನ್ನು ನೆನಪಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಜಾಮಿಯಾ ಮಿಲಿಯಾ ವಿವಿ ಆವರಣದಲ್ಲಿ ರವಿವಾರ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರು.

ದೆಹಲಿ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಉದ್ದವ್‌ ಠಾಕ್ರೆ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಜಲಿಯನ್‌ವಾಲಾ ಬಾಗ್‌ ಹತ್ಯಾಕಾಂಡವನ್ನು ನೆನಪಿಸಿಕೊಂಡರು.

ADVERTISEMENT

‘ನನಗೆ ಈ ವೇಳೆ ಜಲಿಯನ್‌ವಾಲಾ ಬಾಗ್‌ ದುರಂತ ನೆನಪಾಗುತ್ತಿದೆ. ಯುವ ಶಕ್ತಿಯು ಬಾಂಬ್‌ ಇದ್ದಂತೆ. ಅದನ್ನು ಹೊತ್ತಿಸುವ ಕೆಲಸ ಮಾಡಬೇಡಿ‘ ಎಂದು ಕೇಂದ್ರ ಸರ್ಕಾರದ ವಿರುದ್ಧ ಉದ್ದವ್‌ ಠಾಕ್ರೆ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.