ADVERTISEMENT

ಮಹಾರಾಷ್ಟ್ರ ಕ್ರೇನ್‌ ಅವಘಡ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಪಿಟಿಐ
Published 1 ಆಗಸ್ಟ್ 2023, 4:55 IST
Last Updated 1 ಆಗಸ್ಟ್ 2023, 4:55 IST
ಮಹಾರಾಷ್ಟ್ರ ಕ್ರೇನ್‌ ಅವಘಡ (ಟ್ವಿಟರ್‌ ಚಿತ್ರ)
ಮಹಾರಾಷ್ಟ್ರ ಕ್ರೇನ್‌ ಅವಘಡ (ಟ್ವಿಟರ್‌ ಚಿತ್ರ)   

ಮುಂಬೈ: ಸಮೃದ್ಧಿ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ವೇಳೆ ನಡೆದ ಕ್ರೇನ್‌ ಅವಘಡದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇಂದು ಮುಂಜಾನೆ ನಡೆದ ಕ್ರೇನ್‌ ಅವಘಡದಲ್ಲಿ ಇದುವರೆಗೂ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, 'ಮಹಾರಾಷ್ಟ್ರದ ಶಹಾಪುರದಲ್ಲಿ ನಡೆದ ಕ್ರೇನ್‌ ಅವಘಡ ಸುದ್ದಿ ಕೇಳಿ ತುಂಬಾ ನೋವಾಗಿದೆ. ಮೃತರ ಸಾವಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಹೇಳಿದರು.

ADVERTISEMENT

ಓದಿ: ಮುಂಬೈ: ಹೆದ್ದಾರಿ ಕಾಮಗಾರಿ ವೇಳೆ ಕ್ರೇನ್‌ ಕುಸಿತ; ಸ್ಥಳದಲ್ಲೇ 16 ಮಂದಿ ಸಾವು

'ಅವಘಡ ನಡೆದ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ಮತ್ತು ಸ್ಥಳೀಯ ಆಡಳಿತ ಕಾರ್ಯಾಚರಣೆ ನಡೆಸುತ್ತಿವೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್‌) ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಲಾಗಿದೆ' ಎಂದು ತಿಳಿಸಿದ್ದಾರೆ.

ಥಾಣೆ ಜಿಲ್ಲೆಯ ಶಹಾಪುರ ತಹಸಿಲ್‌ನ ಸರ್ಲಾಂಬೆ ಗ್ರಾಮದ ಬಳಿ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ವೇಳೆ ಕ್ರೇನ್‌ ಕುಸಿದು ಅವಘಡ ಸಂಭವಿಸಿದೆ. ಪ್ರತಿ ಕ್ಷಣ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಎನ್‌ಡಿಆರ್‌ಎಫ್‌ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

₹5 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಕ್ರೇನ್‌ ಅವಘಡದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.