ಪುಣೆ: ಮಾಜಿ ಕ್ರಿಕೆಟಿಗ ಸಲೀಲ್ ಅಂಕೊಲಾ ತಾಯಿಯ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪುಣೆಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಪತ್ತೆಯಾಗಿದೆ.
ಪುಣೆಯ ಪ್ರಭಾತ್ ರಸ್ತೆಯಲ್ಲಿರುವ ಡೆಕ್ಕನ್ ಜಿಮ್ಖಾನಾ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮಾಲಾ ಅಶೋಕ ಅಂಕೊಲಾ (77) ಅವರ ಮೃತದೇಹ ಶುಕ್ರವಾರ ಮಧ್ಯಾಹ್ನ ಪತ್ತೆಯಾಗಿದೆ. ಮನೆಗೆಲಸಕ್ಕೆ ಬಂದವರು ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಅವರು ಮಾಲಾ ಅವರ ಸಂಬಂಧಿಕರಿಗೆ ಮಾಹಿತಿ ಮುಟ್ಟಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
‘ಮಾಲಾ ಅವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕುತ್ತಿಗೆಗೆ ತಾವೇ ಚುಚ್ಚಿಕೊಂಡಿರುವ ಸಾಧ್ಯತೆ ಇದೆ. ತನಿಖೆ ಪ್ರಗತಿಯಲ್ಲಿದೆ. ಎಲ್ಲಾ ಆಯಾಮಗಳಿಂದಲೂ ಪ್ರಕರಣದ ತನಿಖೆ ನಡಸಲಾಗುವುದು’ ಎಂದು ಡಿಸಿಪಿ ಸಂದೀಪ್ ಸಿಂಗ್ ಗಿಲ್ ಹೇಳಿದ್ದಾರೆ.
ಮಧ್ಯಮ ವೇಗಿಯಾಗಿದ್ದ ಸಲೀಲ್ ಅಂಕೋಲಾ ಅವರು 1989ರಿಂದ 1997ರವರೆಗೆ 20 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಕ್ರಿಕೆಟ್‌ನಿಂದ ವಿದಾಯ ಹೇಳಿದ ನಂತರ ಕೆಲ ಸಿನಿಮಾ ಹಾಗೂ ಟಿ.ವಿ. ಧಾರವಾಹಿಗಳಲ್ಲೂ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.