ADVERTISEMENT

ಗಾಳಿಯ ಗುಣಮಟ್ಟ ಹೆಚ್ಚಿಸಲು ಕೂಳೆ ಸುಡುವುದನ್ನು ನಿಲ್ಲಿಸಿ: ಸುಪ್ರೀಂ ಕೋರ್ಟ್‌

ಪಿಟಿಐ
Published 13 ಡಿಸೆಂಬರ್ 2023, 14:21 IST
Last Updated 13 ಡಿಸೆಂಬರ್ 2023, 14:21 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ದೆಹಲಿ–ರಾಷ್ಟ್ರ ರಾಜಧಾನಿ ಪ್ರದೇಶದ (ಎನ್‌ಸಿಆರ್) ಗಾಳಿಯ ಗುಣಮಟ್ಟದ ಮೇಲೆ ದುಷ್ಪರಿಣಾಮ ಬೀರುವ ಕೂಳೆ ಸುಡುವ ಕೆಲಸವನ್ನು ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ದೆಹಲಿಯ ಜನ ಪ್ರತಿ ವರ್ಷ ಚಳಿಗಾಲದಲ್ಲಿ ಗಾಳಿಯ ಗುಣಮಟ್ಟ ಕುಸಿತದಿಂದ ಸಮಸ್ಯೆ ಎದುರಿಸಬಾರದು ಎಂದಾದರೆ ನ್ಯಾಯಾಂಗದ ಮೇಲ್ವಿಚಾರಣೆಯ ಅಗತ್ಯವಿದೆ ಎಂದು ಕೂಡ ಹೇಳಿದೆ.

ರೈತರು ತಮ್ಮ ಕೃಷಿ ಜಮೀನಲ್ಲಿ ಕೂಳೆ ಸುಡುತ್ತಿರುವ ಪ್ರಮಾಣವು ಗಮನಾರ್ಹ ಮಟ್ಟದಲ್ಲಿಯೇ ಇದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರು ಇದ್ದ ವಿಭಾಗೀಯ ಪೀಠವು, ಮಾಲಿನ್ಯವನ್ನು ತಗ್ಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ADVERTISEMENT

‘ಮುಂದಿನ ವರ್ಷದ ಚಳಿಗಾಲವು ತುಸು ಉತ್ತಮವಾಗಿರಲಿ ಎಂಬ ಉದ್ದೇಶದಿಂದ ನಾವು ಒಂದು ಪ್ರಯತ್ನ ನಡೆಸೋಣ’ ಎಂದು ‍ಪೀಠವು ಹೇಳಿದೆ. ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿ ಚಳಿಗಾಲದಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿಯುತ್ತಿರುವುದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಈ ಪೀಠ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.