ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನವಾದ ಪರಿಣಾಮ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ವಿರುದ್ಧ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಗೆಲುವು ಸಾಧಿಸಿದ್ದಾರೆ.
68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 40 ಶಾಸಕರನ್ನು ಮತ್ತು ಮೂವರು ಸ್ವತಂತ್ರರ ಬೆಂಬಲವನ್ನು ಪಡೆದಿರುವ ಕಾಂಗ್ರೆಸ್‌ಗೆ ಇದು ದೊಡ್ಡ ಆಘಾತವಾಗಿದೆ.
ಶಾಸಕರು ‘ಆತ್ಮಸಾಕ್ಷಿಯ ಮತ’ ಚಲಾಯಿಸುತ್ತಾರೆ ಎಂದು ಕಾಂಗ್ರೆಸ್ ವಿಶ್ವಾಸದಲ್ಲಿತ್ತು. ಆದರೆ ಬಿಜೆಪಿ ಪರವಾಗಿ ‘ಕೈ‘ನ ಒಂಬತ್ತು ಶಾಸಕರು ಮತ ಚಲಾಯಿಸಿದ್ದಾರೆ.
ಈ ಮೂಲಕ 9 ಶಾಸಕರು ಅಡ್ಡಮತದಾನ ಮಾಡಿದ್ದು, ಬಿಜೆಪಿ ಗೆಲುವಿಗೆ ಕಾರಣವಾಗಿದೆ. ಪ್ರಸ್ತುತ ಬಿಜೆಪಿ ವಿಧಾನಸಭೆಯಲ್ಲಿ 25 ಶಾಸಕರನ್ನು ಹೊಂದಿದೆ.
ಶಾಸಕರ ಅಪಹರಣ: ಸುಖ್ಖು ಆರೋಪ
ಕಾಂಗ್ರೆಸ್‌ನ ಐದಾರು ಶಾಸಕರನ್ನು ಅಪಹರಣ ಮಾಡಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ಖು ಮಂಗಳವಾರ ಆರೋಪಿಸಿದ್ದಾರೆ.
ರಾಜ್ಯಸಭಾ ಚುನಾವಣೆ ಮತದಾನ ಮುಗಿದ ಕೆಲವೇ ಗಂಟೆಗಳ ಬಳಿಕ ಈ ಸುಖ್ಖು ಆರೋಪ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.