ADVERTISEMENT

ಬಾರಾಮುಲ್ಲಾದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್‌ ಸಿಬ್ಬಂದಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ನವೆಂಬರ್ 2021, 7:48 IST
Last Updated 17 ನವೆಂಬರ್ 2021, 7:48 IST
ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಕಾವಲು
ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಕಾವಲು   

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಲ್ಹಾಲನ್‌ ಚೌಕ್‌ ಪ್ರದೇಶದಲ್ಲಿ ಶಂಕಿತ ಉಗ್ರರು ನಡೆಸಿರುವ ಗ್ರನೇಡ್‌ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್‌ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಉಗ್ರರು ಸಿಆರ್‌ಪಿಎಫ್‌ ಸಿಬ್ಬಂದಿ ಮೇಲೆ ಬೆಳಿಗ್ಗೆ 11:15ರ ಸುಮಾರಿಗೆ ಗ್ರೆನೇಡ್‌ ತೂರಿದ್ದು, ಇಬ್ಬರು ಸಿಬ್ಬಂದಿ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ದಾಳಿಕೋರರಿಗಾಗಿ ಇಡೀ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.