ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳೂ ಸೇರಿದಂತೆ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಯುಜಿಸಿ ನಡೆಸುವ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶಾತಿ ಪರೀಕ್ಷೆ (ಸಿಯುಇಟಿ)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್ ಅವರು ಮಂಗಳವಾರ ತಿಳಿಸಿದ್ದಾರೆ.
ಈ ಹಿಂದೆ ಅರ್ಜಿ ಸಲ್ಲಿಸುವ ಕೊನೆಯ ದಿನ ಇಂದು ರಾತ್ರಿ 11 ಗಂಟೆಯವರೆಗೆ ಮಾತ್ರ ಇತ್ತು (ಇಂದು) (ಮಾರ್ಚ್ 26))
ಸಿಯುಇಟಿ– ಯುಜಿ ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು 2024ರ ಮಾರ್ಚ್ 31ರ ರಾತ್ರಿ 9.50ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಮತ್ತು ಪಾಲಕರ ಕೋರಿಗೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.
ದೇಶದಾದ್ಯಂತ ಕೇಂದ್ರ, ರಾಜ್ಯ, ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪ್ರಕ್ರಿಯೆಗಳನ್ನು ಸುಗಮಗೊಳಿಸಲು 2022 ರಲ್ಲಿ ಈ ಪರೀಕ್ಷೆ ಪರಿಚಯಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.