ನವದೆಹಲಿ: ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ‘ಸಿಯುಇಟಿ– ಯುಜಿ’ ಪರೀಕ್ಷೆಯ ಅಂತಿಮ ‘ಕೀ–ಉತ್ತರ’ಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಗುರುವಾರ ಪ್ರಕಟಿಸಿದ್ದು, ಶೀಘ್ರದಲ್ಲಿಯೇ ಫಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದೆ.
ಎನ್‌ಟಿಎ ಜುಲೈ 7ರಂದು ತಾತ್ಕಾಲಿಕ ‘ಕೀ ಉತ್ತರ’ಗಳನ್ನು ಪ್ರಕಟಿಸಿತ್ತು. ವೇಳಾಪಟ್ಟಿಯ ಪ್ರಕಾರ ಜೂನ್ 30ರಂದೇ ಸಿಯುಇಟಿ ಫಲಿತಾಂಶವನ್ನು ಎನ್‌ಟಿಎ ಪ್ರಕಟಿಸಬೇಕಿತ್ತು. ಆದರೆ ‘ನೀಟ್–ಯುಜಿ’, ‘ಯುಜಿಸಿ–ನೆಟ್’, ‘ಸಿಎಸ್ಐಆರ್–ಯುಜಿಸಿ–ನೆಟ್’ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಸೋರಿಕೆ ಆರೋಪಗಳು ವ್ಯಕ್ತವಾದ ಕಾರಣ ಫಲಿತಾಂಶ ಪ್ರಕಟಣೆ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.
63 ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಪರೀಕ್ಷೆಗೆ ದೇಶದಾದ್ಯಂತ 13.4 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದರು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವವರು ದೇಶದ ಒಟ್ಟು 261 ಕೇಂದ್ರ, ರಾಜ್ಯ, ಡೀಮ್ಡ್ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿನ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.