ADVERTISEMENT

ಪಟಿಯಾಲ: ಎರಡು ಗುಂಪುಗಳ ನಡುವೆ ಘರ್ಷಣೆ– ಕರ್ಫ್ಯೂ ಜಾರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2022, 13:42 IST
Last Updated 29 ಏಪ್ರಿಲ್ 2022, 13:42 IST
ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ
ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ   

ಚಂಡೀಗಢ: ಪಟಿಯಾಲಾದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ಗುಂಪಿಗೆ ಸವಾಲೆಸೆದು ಮತ್ತೊಂದು ಗುಂಪು ಮೆರವಣಿಗೆಯನ್ನು ಆಯೋಜಿಸಿತ್ತು. ಈ ವೇಳೆ ಘರ್ಷಣೆ ಉಂಟಾಗಿ ಕತ್ತಿಗಳು ಮತ್ತು ಹರಿತವಾದ ಆಯುಧಗಳನ್ನು ಝಳಪಿಸುತ್ತಾ, ಕಾದಾಡುತ್ತಿದ್ದ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ.

ಹೀಗಾಗಿ ಇಂದು ರಾತ್ರಿ 7 ಗಂಟೆಯಿಂದ ಮುಂಜಾನೆ 6ಗಂಟೆವರೆಗೆ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ.

ADVERTISEMENT

ಈ ಘಟನೆ ದುರದೃಷ್ಟಕರ. ಈ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಸಂಬಂಧ ಡಿಜಿಪಿಯೊಂದಿಗೆ ಮಾತನಾಡಿದ್ದೇನೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ರಾಜ್ಯದಲ್ಲಿ ಶಾಂತಿ ಕದಡುವ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.