ADVERTISEMENT

ಹಲ್ದ್ವಾನಿ ಹಿಂಸಾಚಾರ: ಕೆಲವೆಡೆ ಕರ್ಫ್ಯೂ ತೆರವು

ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಪಿಟಿಐ
Published 10 ಫೆಬ್ರುವರಿ 2024, 15:58 IST
Last Updated 10 ಫೆಬ್ರುವರಿ 2024, 15:58 IST
<div class="paragraphs"><p>ಹಲ್ದ್ವಾನಿಯ ಬನ್‌ಭೂಲ್‌ಪುರ ಪ್ರದೇಶದಲ್ಲಿ ಶನಿವಾರ ಅಂಗಡಿಗಳು ಬಾಗಿಲು ಮುಚ್ಚಿದ್ದವು</p></div>

ಹಲ್ದ್ವಾನಿಯ ಬನ್‌ಭೂಲ್‌ಪುರ ಪ್ರದೇಶದಲ್ಲಿ ಶನಿವಾರ ಅಂಗಡಿಗಳು ಬಾಗಿಲು ಮುಚ್ಚಿದ್ದವು

   

–ಪಿಟಿಐ ಚಿತ್ರ

ಹಲ್ದ್ವಾನಿ: ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಹಿಂಸಾಚಾರ ಭುಗಿಲೆದ್ದಿದ್ದ ಉತ್ತರಖಂಡದ ಬನ್‌ಭೂಲ್‌ಪುರ ಪ್ರದೇಶವನ್ನು ಹೊರತುಪಡಿಸಿ ಉಳಿದೆಡೆ ಶನಿವಾರ ಕರ್ಫ್ಯೂ ತೆರವುಗೊಳಿಸಲಾಗಿತ್ತು.

ADVERTISEMENT

ಹಿಂಸಾಚಾರದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಿ, 15 ದಿವಸಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು‌ ಆದೇಶಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ತಿಳಿಸಿದರು.

ನೈನಿತಾಲ್‌–ಬರೇಲಿ ಮಾರ್ಗದಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿತ್ತು ಮತ್ತು ಅಂಗಡಿಗಳು ತೆರೆದಿದ್ದವು ಎಂದು ಮೂಲಗಳು ಹೇಳಿವೆ.

ಕರ್ಫ್ಯೂ ವಿಧಿಸಿರುವ ಪ್ರದೇಶಗಳಲ್ಲಿ ಆಸ್ಪತ್ರೆಗಳು ಮತ್ತು ಮೆಡಿಕಲ್‌ಗಳು ಮಾತ್ರ ತೆರೆದಿದ್ದವು. ಗಲಭೆ ನಡೆದಿದ್ದ ಪ್ರದೇಶದಲ್ಲಿ ಪೊಲೀಸರು ಗಸ್ತು ಕಾರ್ಯ ನಡೆಸಿದ್ದರು ಎಂದು ವಿವರಿಸಿವೆ.

ಗುರುವಾರ ನಡೆದಿದ್ದ ಹಿಂಸಾಚಾರದಲ್ಲಿ ಶಾಮೀಲಾಗಿದ್ದ ಆರೋಪದಲ್ಲಿ ಇದುವರೆಗೆ ಐವರನ್ನು ಬಂಧಿಸಲಾಗಿದೆ ಮತ್ತು ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದರು.

ಎಫ್‌ಐಆರ್‌ನಲ್ಲಿ ಒಟ್ಟು 16 ಮಂದಿಯ ಹೆಸರು ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಡುವುದನ್ನು ತಡೆಯುವ ಸಲುವಾಗಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ. ಹಿಂಸಾಚಾರದಲ್ಲಿ ಆರು ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.