ನವದೆಹಲಿ:ಲಂಚ ಪಡೆದ ಆರೋಪದಲ್ಲಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧದ ತನಿಖೆಯನ್ನು ಕೇಂದ್ರ ಜಾಗೃತ ಆಯೋಗವು ಶುಕ್ರವಾರ ಪೂರ್ಣಗೊಳಿಸಿದೆ. ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಅಲೋಕ್ ವರ್ಮಾ ಮತ್ತು ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ನಡುವಣ ಪರಸ್ಪರ ಆರೋಪ ಪ್ರತ್ಯಾರೋಪಗಳ ಕಾರಣ ಇಬ್ಬರನ್ನೂ ದೀರ್ಘ ರಜೆಯ ಮೇಲೆ ಕಳುಹಿಸಿ ಸರ್ಕಾರ ಆದೇಶ ಹೊರಡಿಸಿತ್ತು.ಈ ಆದೇಶದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿತ್ತು.
‘ಅಲೋಕ್ ವರ್ಮಾ ವಿರುದ್ಧದ ಆರೋಪಗಳ ಬಗ್ಗೆ ಎರಡು ವಾರಗಳ ಒಳಗೆ ತನಿಖೆ ನಡೆಸಿ ವರದಿ ಸಲ್ಲಿಸಿ’ ಎಂದು ಜಾಗೃತ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಈ ಆರೋಪಗಳ ಸಂಬಂಧ ಇಬ್ಬರು ಅಧಿಕಾರಿಗಳನ್ನೂ ಕರೆಸಿಕೊಂಡಿದ್ದ ಆಯೋಗವು ಹೇಳಿಕೆ ದಾಖಲಿಸಿಕೊಂಡಿತ್ತು. ವರ್ಮಾ ಅವರು ಗುರುವಾರ ತಮ್ಮ ಹೇಳಿಕೆಯನ್ನು ಲಿಖಿತ ರೂಪದಲ್ಲಿ ದಾಖಲಿಸಿದ್ದರು. ಆಯೋಗವು ಶುಕ್ರವಾರವೂ ಅವರನ್ನು ಕರೆಸಿಕೊಂಡು ಮತ್ತೆ ಹೇಳಿಕೆ ದಾಖಲಿಸಿಕೊಂಡಿದೆ. ಅಸ್ತಾನಾ ಅವರ ಹೇಳಿಕೆಯನ್ನೂ ದಾಖಲಿಸಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.