ಕೋಲ್ಕತ್ತ: ಡಾನಾ ಚಂಡಮಾರುತದ ಅಬ್ಬರ ತಗ್ಗಿದೆ. ಹೀಗಾಗಿ ಶುಕ್ರವಾರ ಬೆಳಿಗ್ಗೆಯಿಂದ ಪಶ್ಚಿಮ ಬಂಗಾಳದಲ್ಲಿ ರೈಲು ಹಾಗೂ ವಿಮಾನ ಸಂಚಾರ ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂಡಮಾರುತದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ನಿನ್ನೆ (ಗುರುವಾರ) ಸಂಜೆಯಿಂದಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.
ಶುಕ್ರವಾರ ಬೆಳಿಗ್ಗೆಯಿಂದ ವಿಮಾನ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂದು ಕೋಲ್ಕತ್ತದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಸಿಯಾಲ್‌ದಾ ದಕ್ಷಿಣ ವಿಭಾಗದಲ್ಲಿ ರೈಲು ಸೇವೆಗಳು ಶುಕ್ರವಾರ ಬೆಳಿಗ್ಗೆಯಿಂದ ಪುನರಾರಂಭಗೊಂಡವು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಕ್ಟೋಬರ್ 23 ಮತ್ತು 27ರ ನಡುವೆ ನಿಗದಿಪಡಿಸಲಾದ 170ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ರೈಲ್ವೆ ಇಲಾಖೆಯು ರದ್ದುಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.