ನವದೆಹಲಿ: ಮಿಚಾಂಗ್ ಚಂಡಮಾರುತದಿಂದ ಹಾನಿಗೊಳಗಾದ ರಾಜ್ಯಗಳಿಗೆ ಕೇಂದ್ರ ಸಹಾಯ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ಜನರ ಸುರಕ್ಷತೆಗೆ ಮೊದಲ ಆದ್ಯತೆ. ಚಂಡಮಾರುತದಿಂದ ಹಾನಿಗೊಳಗಾದ ರಾಜ್ಯಗಳಲ್ಲಿನ ತಮ್ಮ ಕಾರ್ಯಕರ್ತರಲ್ಲಿ ನಾಗರಿಕರಿಗೆ ಎಲ್ಲ ರೀತಿಯ ಸಹಾಯ ಮಾಡುವಂತೆ ವಿನಂತಿ ಮಾಡಿದ್ದಾರೆ.
ಮಿಚಾಂಗ್ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಇದು ಅತ್ಯಂತ ದುಃಖಕರ. ಚಂಡಮಾರುತವು ಆಂಧ್ರಪ್ರದೇಶ, ಒಡಿಶಾ, ಪುದುಚೇರಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲೂ ಭಾರಿ ಮಳೆಯಾಗಬಹುದು ಎಂದು ಹೇಳಿದ್ದಾರೆ.
ಚಂಡಮಾರುತದಿಂದ ಹಾನಿಗೊಳಗಾದ ರಾಜ್ಯಗಳು ಎಲ್ಲ ರೀತಿಯ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯಬೇಕು. ಈ ಬಿಕ್ಕಟ್ಟನ್ನು ಎದುರಿಸಲು ನಾವೆಲ್ಲ ಒಗ್ಗಟ್ಟಾಗಿರಬೇಕು ಎಂದು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.