ADVERTISEMENT

ಆಂಧ್ರಕ್ಕೆ ಅಪ್ಪಳಿಸಿದ ‘ಮಿಚಾಂಗ್‌’ ಚಂಡಮಾರುತ: ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2023, 2:17 IST
Last Updated 5 ಡಿಸೆಂಬರ್ 2023, 2:17 IST
<div class="paragraphs"><p>ಆಂಧ್ರಪ್ರದೇಶದಲ್ಲಿ ಮಳೆ</p></div>

ಆಂಧ್ರಪ್ರದೇಶದಲ್ಲಿ ಮಳೆ

   

–ಪಿಟಿಐ ಚಿತ್ರ

ಅಮರಾವತಿ: ‘ಮಿಚಾಂಗ್‌’ ಚಂಡಮಾರುತ ಇಂದು ಬೆಳಿಗ್ಗೆ ಆಂಧ್ರದ ಕರಾವಳಿಗೆ ಅಪ್ಪಳಿಸಿದೆ. ಇದರ ವೇಗ ಗಂಟೆಗೆ 90–100 ಕಿ.ಮೀ ಇದ್ದು, ಕ್ರಮೇಣ 110 ಕಿ.ಮೀ.ಗೆ ಏರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ಆದರೆ, ಆಂಧ್ರದ ವಿವಿಧೆಡೆ ಸೋಮವಾರವೇ ಭಾರಿ ಮಳೆಯಾಗಿದೆ. ‘ಮುಂದಿನ 24 ಗಂಟೆಗಳ ಅವಧಿಯಲ್ಲಿ 200 ಮಿ.ಮೀವರೆಗೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ’ ಎಂದು ರಾಯಿಟರ್ಸ್ ವರದಿ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ಸುತ್ತುತ್ತಿರುವ ಮಿಚಾಂಗ್‌ ಚಂಡಮಾರುತವು ಆಂಧ್ರ ಕರಾವಳಿಯತ್ತ ಸಾಗಿದ್ದು, ನೆಲ್ಲೂರು, ಮಚಲಿಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿ, ಕಾಕಿನಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಆಂಧ್ರ ಮುಖ್ಯಮಂತ್ರಿ ವೈ. ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರು ಪೂರ್ವಭಾವಿ ಸಭೆ ನಡೆಸಿದ್ದು, ಚಂಡಮಾರುತವನ್ನು ಎದುರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಗಂಟೆಗೆ 100–110 ಕಿ. ಮೀನಷ್ಟು ವೇಗದಲ್ಲಿ ಗಾಳಿ ಬೀಸಲಿದ್ದು, ಬಾಪಟ್ಲಾ ಜಿಲ್ಲೆಯಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಮುಖ್ಯಂಮತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ರೀತಿಯ ವಾತಾವರಣ ಡಿ.7ರವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಬಳಿಕ ಚಂಡಮಾರುತ ದುರ್ಬಲವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.