ADVERTISEMENT

ಮಿಚಾಂಗ್‌ ಚಂಡಮಾರುತ: ತಮಿಳುನಾಡಿನಲ್ಲಿ ಇಂದು ಶಾಲೆಗಳಿಗೆ ರಜೆ, ರೈಲು ಸಂಚಾರ ರದ್ದು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2023, 2:33 IST
Last Updated 4 ಡಿಸೆಂಬರ್ 2023, 2:33 IST
<div class="paragraphs"><p>ತಮಿಳುನಾಡಿನಲ್ಲಿ ಮಳೆ</p></div>

ತಮಿಳುನಾಡಿನಲ್ಲಿ ಮಳೆ

   

–ಪಿಟಿಐ ಚಿತ್ರ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪರಿಣಾಮ ಹಲವು ಭಾಗಗಳಲ್ಲಿ ಡಿ.5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದ ಬೆನ್ನಲ್ಲೇ, ತಮಿಳುನಾಡು ಚಂಡಮಾರುತ ಎದುರಿಸಲು ಸಜ್ಜಾಗಿದೆ.

ADVERTISEMENT

ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಸೋಮವಾರ) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ. ಬೀಚ್‌ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ.

ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಡಿ.3ರಿಂದ 7ರವರೆಗೆ ಸುಮಾರು 144 ರೈಲುಗಳ ಸೇವೆಯನ್ನು ರದ್ದಾಗಿವೆ.

ಬಂಗಾಳಕೊಲ್ಲಿಯಲ್ಲಿ ಡಿ.3ರ ವೇಳೆಗೆ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಅದು ಡಿ.4ರಂದು ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗೆ ಅದು ಅಪ್ಪಳಿಸಲಿದೆ. ಇದರ ಪರಿಣಾಮ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಈ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಚಂಡಮಾರುತಕ್ಕೆ ಮ್ಯಾನ್ಮಾರ್‌ ಸಲಹೆಯಂತೆ ‘ಮಿಚಾಂಗ್‌’ ಎಂದು ಹೆಸರಿಡಲಾಗಿದೆ.

ಈ ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ

ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.