ADVERTISEMENT

ಡಾನಾ ಚಂಡಮಾರುತ | 1.75 ಲಕ್ಷ ಎಕರೆ ಕೃಷಿ ಭೂಮಿ ಜಲಾವೃತ: ಒಡಿಶಾ ಸರ್ಕಾರ

ಪಿಟಿಐ
Published 26 ಅಕ್ಟೋಬರ್ 2024, 6:11 IST
Last Updated 26 ಅಕ್ಟೋಬರ್ 2024, 6:11 IST
<div class="paragraphs"><p>ಡಾನಾ ಚಂಡಮಾರುತದಿಂದಾಗಿ ಸುರಿದ ಭಾರಿ ಮಳೆಯಿಂದಾಗಿ ಒಡಿಶಾದಲ್ಲಿ&nbsp;1.75 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ</p></div>

ಡಾನಾ ಚಂಡಮಾರುತದಿಂದಾಗಿ ಸುರಿದ ಭಾರಿ ಮಳೆಯಿಂದಾಗಿ ಒಡಿಶಾದಲ್ಲಿ 1.75 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ

   

ಪಿಟಿಐ ಚಿತ್ರ

ಭುವನೇಶ್ವರ: ‘ಡಾನಾ’ ಚಂಡಮಾರುತದಿಂದ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 1.75 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ. ಅಲ್ಲದೆ, 2.80 ಲಕ್ಷ ಎಕರೆ ಪ್ರದೇಶ ಜಲಾವೃತಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಚಂಡಮಾರುತದಿಂದ ಉಂಟಾಗಿರುವ ಬೆಳೆ ನಷ್ಟದ ಕುರಿತು ಜಂಟಿ ಮೌಲ್ಯಮಾಪನ ನಡೆಸುವಂತೆ ಕೃಷಿ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕೃಷಿ ಮತ್ತು ರೈತ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅರಬಿಂದ ಪಾಧಿ, ‘ಡಾನಾ ಚಂಡಮಾರುತದಿಂದ ರಾಜ್ಯದಲ್ಲಿ ಸುಮಾರು 1.75 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ. ಸುಮಾರು 2.80 ಲಕ್ಷ ಎಕರೆ ಪ್ರದೇಶ ಮುಳುಗಡೆಗೊಂಡಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ’ ಎಂದು ತಿಳಿಸಿದ್ದಾರೆ.

ಚಂಡಮಾರುತದ ಹಾನಿ ಕುರಿತು ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಮೋಹನ್‌ ಚರಣ್‌ ಮಾಝಿ ಅವರು ‘ಚಂಡಮಾರುತದಿಂದಾಗಿ ಕೃಷಿ ಕ್ಷೇತ್ರದಲ್ಲಿ ಉಂಟಾಗಿರುವ ನಷ್ಟದ ಅಂತಿಮ ಅಂದಾಜಿನ ವಿವರ ವರದಿಯಿಂದ ತಿಳಿದುಬರುತ್ತದೆ. ಅದರ ಆಧಾರದ ಮೇಲೆ ಸರ್ಕಾರವು ರೈತರಿಗೆ ಪರಿಹಾರವನ್ನು ನಿರ್ಧರಿಸುತ್ತದೆ’ ಎಂದು ಹೇಳಿದ್ದರು.

‘ಚಂಡಮಾರುತದಿಂದಾಗುವ ಅಪಾಯ ತಪ್ಪಿಸಲು ಸುಮಾರು 8 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಹವಾಮಾನ ಸುಧಾರಿಸಿದ ಕಾರಣ ಅವರಲ್ಲಿ ಹಲವರಿಗೆ ಮನೆಗೆ ಮರಳಲು ಅವಕಾಶ ನೀಡಲಾಗಿದೆ. ಅಲ್ಲದೆ, ಚಂಡಮಾರುತದಿಂದಾಗಿ ರಾಜ್ಯದ ಸುಮಾರು 22.42 ಲಕ್ಷ ಮನೆಗಳ ವಿದ್ಯುತ್‌ ಪೂರೈಕೆ ಕಡಿತಗೊಂಡಿತ್ತು. ಶುಕ್ರವಾರ ಸಂಜೆ ವೇಳೆಗೆ 14.8 ಲಕ್ಷ ಮನೆಗಳಿಗೆ ವಿದ್ಯುತ್‌ ಪೂರೈಕೆಯನ್ನು ಪುನಃಸ್ಥಾಪಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.