ಚೆನ್ನೈ/ಸೇಲಂ: ಗಾಜಾ ಚಂಡಮಾರುತಕ್ಕೆ ಸಂಬಂಧಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ ಶನಿವಾರ 33ಕ್ಕೆ ಏರಿಕೆಯಾಗಿದೆ. ಚಂಡಮಾರುತದ ತೀವ್ರತೆ ತಗ್ಗಿದ್ದರೂ ತಮಿಳುನಾಡಿನ ಹಲವೆಡೆ ಭಾರಿ ಮಳೆ ಮುಂದುವರೆದಿದೆ.
‘ಚಂಡಮಾರುತ ಪ್ರವೇಶಿಸುವ ಮುನ್ನವೇ 82,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿದ್ದೆವು. ಹೀಗಾಗಿ ಪ್ರಾಣಹಾನಿಯ ಪ್ರಮಾಣ ಕಡಿಮೆ ಇದೆ. ಬಿರುಗಾಳಿಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ’ ಎಂದು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಹೇಳಿದ್ದಾರೆ.
ರಕ್ಷಣಾ ಕಾರ್ಯಕ್ಕೆ ನೌಕಾಪಡೆಯ ಹೆಲಿಕಾಪ್ಟರ್ ಮತ್ತು ದೋಣಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಮಳೆಯಿಂದ ಆಗಿರುವ ಹಾನಿಯ ಸಮೀಕ್ಷೆ ನಡೆಸಲೂ ನೌಕಾಪಡೆಯ ಹೆಲಿಕಾಪ್ಟರ್ ಅನ್ನು ಬಳಿಸಿಕೊಳ್ಳಲಾಗುತ್ತಿದೆ.
ಪುದುಚೇರಿಯಲ್ಲೂ ಹಾನಿ:ಗಾಜಾ ಚಂಡಮಾರುತದಿಂದ ಪುದುಚೇರಿಯಲ್ಲೂ ಹಾನಿಯಾಗಿದೆ. ಪರಿಹಾರ ಕಾರ್ಯದಲ್ಲಿ ನೆರವಾಗುವಂತೆ ಪುದುಚೇರಿ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.